ADVERTISEMENT

ಬಂಡಾಯ ಅಭ್ಯರ್ಥಿಗಳ ಮನವೊಲಿಕೆ: ವಿ.ಸುನಿಲ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 15 ಮೇ 2024, 17:36 IST
Last Updated 15 ಮೇ 2024, 17:36 IST
ವಿ.ಸುನಿಲ್‌ಕುಮಾರ್
ವಿ.ಸುನಿಲ್‌ಕುಮಾರ್   

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ಬಂಡಾಯವಾಗಿ ಸ್ಪರ್ಧಿಸಿರುವವರ ಮನವೊಲಿಸುವ ಕಾರ್ಯ ನಡೆದಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ಕುಮಾರ್ ಹೇಳಿದರು.

‘ಈಗಾಗಲೇ ನಾನು ರಘುಪತಿ ಭಟ್‌ ಅವರ ಜತೆ ಮಾತನಾಡಿದ್ದೇನೆ. ಅವರು ಪಕ್ಷದ ಜತೆಗೆ ಇರುತ್ತಾರೆ, ಪಕ್ಷದ ವಿರುದ್ಧ ಹೋಗುವುದಿಲ್ಲ ಎಂದು ಭಾವಿಸುತ್ತೇನೆ. ಟಿಕೆಟ್‌ಗೆ ಪ್ರಯತ್ನಿಸಿ ಸಿಗದಿದ್ದಾಗ ಅಸಮಾಧಾನಗೊಳ್ಳುವುದು ಸಹಜ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT