ಶಿವಮೊಗ್ಗ: ಸಾಗರ ತಾಲ್ಲೂಕಿನ ಸಿಂಗದೂರಿನ ಚೌಡೇಶ್ವರಿ ದೇವಿಯ ದೇವಸ್ಥಾನ ನಿರ್ವಹಣೆಗೆ ನಾಲ್ವರ ಮೇಲ್ವಿಚಾರಣಾ ಮತ್ತು ಸಲಹಾ ಸಮಿತಿ ರಚಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ, ಸಾಗರ ಉಪ ವಿಭಾಗಾಧಿಕಾರಿ, ಒಬ್ಬರು ನಿವೃತ್ತ ನ್ಯಾಯಾಧೀಶರು ಹಾಗೂ ಲೆಕ್ಕಪರಿಶೋಧಕರು ಸಮಿತಿಯ ಸದಸ್ಯರಾಗಿರುತ್ತಾರೆ.
ದೇವಸ್ಥಾನ ಸರ್ಕಾರಿ ಜಾಗದಲ್ಲಿದೆ. ಹೀಗಾಗಿ ಹಣಕಾಸಿನ ನಿರ್ವಹಣೆ, ಭಕ್ತರಿಗೆ ಸೂಕ್ತ ಅನುಕೂಲತೆ ಕಲ್ಪಿಸುವುದು. ಸಂಘರ್ಷಗಳಿಗೆ ಅವಕಾಶ ಇಲ್ಲದಂತೆ ಸುಗಮ ನಿರ್ಹಣೆಗಾಗಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.