ADVERTISEMENT

ದರ ಕುಸಿತಗೊಂಡ ಕೃಷಿ ಉತ್ಪನ್ನಗಳ ಖರೀದಿ: ಜನವರಿ 1ರಿಂದ ತೆರೆಯಲಿವೆ ಕೇಂದ್ರಗಳು

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 1:10 IST
Last Updated 16 ಡಿಸೆಂಬರ್ 2019, 1:10 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ   

ರಾಯಚೂರು: ‘ಜನವರಿ 1ರಿಂದ ಭತ್ತ ಸೇರಿ ದರ ಕುಸಿತಗೊಂಡ ಎಲ್ಲ ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆಯಲ್ಲಿ ಕೊಳ್ಳಲು ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು’ ಎಂದು ಕೃಷಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಲ್ಲಿ ಭಾನುವಾರ ಕೃಷಿ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ‘ಸ್ವಾಮಿನಾಥನ್‌ ವರದಿ ಅನುಷ್ಠಾನದ ಭಾಗವಾಗಿ ಕೇಂದ್ರ ಸರ್ಕಾರ 23 ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಿದೆ. ರೈತರ ಬೆಳೆಗೆ ವೈಜ್ಞಾನಿಕ ಬೆಲೆ ದೊರಕಿಸಲು ರಾಜ್ಯದಿಂದ ಪಾಲು ನೀಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT