ADVERTISEMENT

ಗೋಕರ್ಣದ ‌ದೇಗುಲ ಹಸ್ತಾಂತರ ರದ್ದುಪಡಿಸಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2018, 9:20 IST
Last Updated 7 ಸೆಪ್ಟೆಂಬರ್ 2018, 9:20 IST
   

ನವದೆಹಲಿ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನವನ್ನು ರಾಮಚಂದ್ರಾಪುರ‌ ಮಠದಿಂದ ಧಾರ್ಮಿಕ ದತ್ತಿ ಇಲಾಖೆಗೆ ವಹಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ‌.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇನ್ಮನವಿ ಸಲ್ಲಿಸಿದ್ದ ರಾಮಚಂದ್ರಾಪುರ ಮಠಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಕೋರಿ ನೋಟಿಸ್ ನೀಡಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಹೈಕೋರ್ಟ್ ಆದೇಶ ಜಾರಿಯಲ್ಲಿರಲಿದೆ ಎಂದು ತಿಳಿಸಿತು.

ದೇವಾಲಯದ ಉಸ್ತುವಾರಿಯನ್ನು ನೋಡಿಕೊಳ್ಳಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ರಚಿಸಲಾಗಿರುವ ಮೇಲುಸ್ತುವಾರಿ ಸಮಿತಿಯ ಕಾರ್ಯ ನಿರ್ವಹಣೆಗೆ ಒಪ್ಪಿಗೆ ನ್ಯಾಯಾಲಯ ಒಪ್ಪಿಗೆ ನೀಡಿದೆ.

ಇದೇ 10ರಿಂದ ದೇಖರೇಖಿ ಸಮಿತಿಯು ದೇಗುಲವನ್ನು ತನ್ನ ವಶಕ್ಕೆ ಪಡೆದು ಕಾರ್ಯ ನಿರ್ವಹಿಸಬೇಕು ಎಂದು ಹೈಕೋರ್ಟ್ ಕಳೆದ ಆಗಸ್ಟ್ 10ರಂದು ಆದೇಶಿಸಿತ್ತು.

ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೂ ಹೈಕೋರ್ಟ್ ಆದೇಶ ಪಾಲನೆಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.