
ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿದ್ದ ಪೀಠವು ಜಾಮೀನು ನೀಡಿದೆ.
ಈ ಹಿಂದೆ ನೀಡಲಾಗಿದ್ದ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಇತ್ತೀಚೆಗೆ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗಿದ್ದರು.
‘ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪದಡಿ ವಿನಯ ಕುಲಕರ್ಣಿ ಅವರ ಜಾಮೀನು ರದ್ದುಪಡಿಸಬೇಕು’ ಎಂದು ಸಿಬಿಐ ಕೋರಿತ್ತು. ಈ ಹಿನ್ನೆಲೆಯಲ್ಲಿ ಅವರ ಜಾಮೀನು ರದ್ದಾಗಿತ್ತು.ಅದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಪ್ರಕರಣವೇನು?
ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.