ನವದೆಹಲಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್) ರಾಸಾಯನಿಕ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಲೋಕಾಯುಕ್ತ ಸಂಸ್ಥೆ ಸಲ್ಲಿಸಿದ ಮೇಲ್ಮನವಿಯ ಸಂಬಂಧ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರ ಪೀಠವು ಮಾಡಾಳ್ ಅವರಿಂದ ಪ್ರತಿಕ್ರಿಯೆ ಕೇಳಿದೆ.
ಲೋಕಾಯುಕ್ತ ಪರವಾಗಿ ಹಿರಿಯ ವಕೀಲ ಬಸವಪ್ರಭು ಪಾಟೀಲ ಹಾಗೂ ಮಾಡಾಳ್ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.