ನವದೆಹಲಿ: ಧರ್ಮಸ್ಥಳದ ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳನ್ನು ನಿರ್ಬಂಧಿಸಿದ ಬೆಂಗಳೂರು ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ‘ಥರ್ಡ್ ಐ’ ಯೂಟ್ಯೂಬ್ ಚಾನೆಲ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿಗಳಾದ ಕೆ.ವಿನೋದ್ ಚಂದ್ರನ್ ಹಾಗೂ ಜೊಯ್‌ಮಲ್ಯ ಬಾಗ್ಚಿ ಅವರಿದ್ದ ಪೀಠವು ‘ಹೈಕೋರ್ಟ್‌ನಲ್ಲಿ ಏಕೆ ಅರ್ಜಿ ಸಲ್ಲಿಸಿಲ್ಲ’ ಎಂದು ಅರ್ಜಿದಾರರನ್ನು ಪ್ರಶ್ನಿಸಿತು. ‘ಮೊದಲು ಹೈಕೋರ್ಟ್‌ಗೆ ಹೋಗಿ’ ಎಂದು ಸಿಜೆಐ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.