ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯುವ ಕೃತ್ಯ ಖಂಡನೀಯ. ಇದು ಡಾ.ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನಕ್ಕೆ ಅಪಚಾರ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಇದು ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗ ವ್ಯವಸ್ಥೆಗೂ ಆಗಿರುವ ಅಪಚಾರ’ ಎಂದು ಹೇಳಿದರು.
‘ಒಬ್ಬ ವಕೀಲನ ಇಂಥ ಪುಂಡಾಟಿಕೆಯನ್ನು ಪ್ರಧಾನಿಯವರೂ ಸೇರಿ ಎಲ್ಲರೂ ವಿರೋಧಿಸಿದ್ದಾರೆ. ಇದು ದೇಶವೇ ತಲೆ ತಗ್ಗಿಸುವ ಕೃತ್ಯ. ವಕೀಲನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಕ್ಷಮೆಗೆ ಅರ್ಹವಲ್ಲದ ಕೃತ್ಯವಾಗಿದ್ದು, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.