ನವದೆಹಲಿ: ಎರಡು ಕಂಪನಿಗಳಿಂದ ವಶಪಡಿಸಿಕೊಂಡಿದ್ದ 5663 ಟನ್ ಹಾಗೂ 4864 ಟನ್ ಕಬ್ಬಿಣದ ಅದಿರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ 2024ರ ಜೂನ್ 11ರಂದು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
2012ರಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಬೇಲೆಕೇರಿ ಬಂದರಿನಲ್ಲಿ ಅದಿರುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಬೇಲೆಕೇರಿಯ ವಲಯ ಅರಣ್ಯಾಧಿಕಾರಿ ಸಲ್ಲಿಸಿದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ರಾಜಮಹಲ್ ಸಿಲ್ಕ್ಸ್ ಮತ್ತು ಗಿಂಪೆಕ್ಸ್ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡಿದೆ.
ರಾಜ್ಯದಲ್ಲಿ ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆಗೆ ಸಂಬಂಧಿಸಿದಂತೆ 2012ರ ಸೆಪ್ಟೆಂಬರ್ 7ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶಕ್ಕೆ ಹೈಕೋರ್ಟ್‌ನ ಆದೇಶವು ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹಿರಿಯ ವಕೀಲ ದೇವದತ್ತ ಕಾಮತ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ನಿಶಾಂತ್ ಪಾಟೀಲ ವಾದಿಸಿದರು.
2010ರಂದು ಬೇಲೆಕೇರಿ ಬಂದರಿನಲ್ಲಿ ವಶಪಡಿಸಿಕೊಂಡ ಕಬ್ಬಿಣದ ಅದಿರಿಗೆ ಸಂಬಂಧಿಸಿದಂತೆ ಸಿಇಸಿ ವರದಿಯನ್ನು ಆಧರಿಸಿ ನ್ಯಾಯಾಲಯವು ಈ ನಿರ್ದೇಶನ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.