
ಬೆಂಗಳೂರು: ‘ಸ್ವಪಕ್ಷದ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಿಂದ ನನ್ನನ್ನು ಕೈಬಿಡಬೇಕು’ ಎಂದು ಕೋರಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
‘ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿನ ಆರೋಪದಿಂದ ನನ್ನನ್ನುಮುಕ್ತಗೊಳಿಸಬೇಕು’ ಎಂದು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಈ ಕುರಿತಂತೆ ಆದೇಶಿಸಿದ್ದಾರೆ.
‘ಅರ್ಜಿಗೆ ಸಂಬಂಧಿಸಿದಂತೆ ನಗರದ 42ನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 2025ರ ನವೆಂಬರ್ 28ರಂದು ಹೊರಡಿಸಿರುವ ಆದೇಶವನ್ನು ದೃಢೀಕರಿಸಲಾಗಿದೆ’ ಎಂದು ಸೆಷನ್ಸ್ ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.