ADVERTISEMENT

ಸುರೇಶ ಅಂಗಡಿ, ಮೂವರು ಶಾಸಕರಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 15:31 IST
Last Updated 11 ಸೆಪ್ಟೆಂಬರ್ 2020, 15:31 IST
ಸುರೇಶ ಅಂಗಡಿ
ಸುರೇಶ ಅಂಗಡಿ   

ಬೆಳಗಾವಿ: ಇಲ್ಲಿನ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಶುಕ್ರವಾರ ಕೋವಿಡ್–19 ದೃಢ‍ಪಟ್ಟಿದೆ.

ತಮ್ಮ ಫೇಸ್‌ಬುಕ್‌ ಹಾಗೂ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, ‘ನಾನು ಕೋವಿಡ್–19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಂಡು, ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು’ ಎಂದು ತಿಳಿಸಿದ್ದಾರೆ.

ಸಿಂಧನೂರು (ರಾಯಚೂರು ಜಿಲ್ಲೆ): ಶಾಸಕ ವೆಂಕಟರಾವ್ ನಾಡಗೌಡ ಅವರಿಗೆ ಕೋವಿಡ್‌ ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ADVERTISEMENT

ಮೈಸೂರು: ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್‌ ಹಾಗೂ ಎಚ್‌.ಡಿ.ಕೋಟೆ ಶಾಸಕ ಅನಿಲ್‌ ಕುಮಾರ್‌ ಸಿ. ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ.

ಮಂಜುನಾಥ್‌ ಅವರು ಒಂದು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಅನಿಲ್ ಕುಮಾರ್ ಅವರು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.