ADVERTISEMENT

ಬೆಳಗಾವಿಯಲ್ಲೇ ಪ್ರಾದೇಶಿಕ ಕಚೇರಿ ಸ್ಥಾಪಿಸಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 7:40 IST
Last Updated 5 ಸೆಪ್ಟೆಂಬರ್ 2020, 7:40 IST
ಬೆಳಗಾವಿ ಸಂಸದರೂ ಆಗಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ದೆಹಲಿಯಲ್ಲಿ ಚರ್ಚಿಸಿದರು
ಬೆಳಗಾವಿ ಸಂಸದರೂ ಆಗಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ದೆಹಲಿಯಲ್ಲಿ ಚರ್ಚಿಸಿದರು   

ಬೆಳಗಾವಿ: ನಗರದಲ್ಲಿ ಪ್ರಾದೇಶಿಕ ಇ–ಮೌಲ್ಯಮಾಪನ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾದ ಸಚಿವರು, ಕೇಂದ್ರದ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.

‘ನಗರದಲ್ಲಿರುವ ಆದಾಯ ತೆರಿಗೆ ಕಚೇರಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ಬೇರೆ ಕಡೆಗೆ ಸ್ಥಳಾಂತರಿಸಬಾರದು. ಬೆಳಗಾವಿ ಸೇರಿದಂತೆ ರಾಜ್ಯದಲ್ಲಿರುವ ಆದಾಯ ತೆರಿಗೆ ಕಚೇರಿಗಳನ್ನು ಮೇಲ್ದರ್ಜೆಗೇರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಇಲ್ಲಿ ಪ್ರಾದೇಶಿಕ ಇ–ಮೌಲ್ಯಮಾಪನ ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಭಾರತೀಯ ಲೆಕ್ಕಪತ್ರ ಪರಿಶೋಧಕರ ಸಂಘ ಬೆಳಗಾವಿ ಘಟಕದವರು ಸಂಸದರಿಗೆ ಈಚೆಗೆ ಮನವಿ ಸಲ್ಲಿಸಿದ್ದರು. ಅಲ್ಲದೇ, ಆದಾಯ ತೆರಿಗೆ ಕಚೇರಿ ಸ್ಥಳಾಂತರಿಸುವ ಪ್ರಸ್ತಾವ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.