ಬೆಂಗಳೂರು: ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ದೆಹಲಿಯಲ್ಲಿದ್ದ ಬೆಳಗಾವಿ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ (66) ಅವರು ಕೋವಿಡ್–19ನಿಂದ ಮೃತಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.
'ಸುರೇಶ್ ಅಂಗಡಿ ಅವರು ಅತ್ಯುತ್ತಮ ಕಾರ್ಯಕರ್ತರಾಗಿದ್ದರು. ಕರ್ನಾಟಕದಲ್ಲಿ ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಸಾಕಷ್ಟು ಶ್ರಮಿಸಿದ್ದರು. ಅವರ ಉತ್ತಮ ಸಂಸದ ಮತ್ತು ಸಚಿವ ಸ್ಥಾನವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ್ದರು. ಅವರ ಅಗಲಿಕೆ ನೋವು ತಂದಿದೆ....' ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ.
ಇನ್ನಷ್ಟು ಓದು:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.