ಚಿಕ್ಕಬಳ್ಳಾಪುರ: ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಮತ್ತು ಆಗಸ್ಟ್ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕೇಂದ್ರ ಸರ್ಕಾರದ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದ ಬಳಿಕವಷ್ಟೇ ಯಾವ ರೀತಿಯಲ್ಲಿ ಆನ್‌ಲೈನ್ ಶಿಕ್ಷಣ ಜಾರಿಗೆ ತರಬೇಕು ಎನ್ನುವ ಕುರಿತು ನಿರ್ಧರಿಸಲಾಗುವುದು’ ಎಂದು ಹೇಳಿದರು.
‘ಎಲ್‌ಕೆಜಿ, ಯುಕೆಜಿಗೆ ಆನ್‌ಲೈನ್ ಶಿಕ್ಷಣ ಜಾರಿ ಮಾಡುವುದಿಲ್ಲ. ಆದರೆ, ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಯಾವ ತಂತ್ರಜ್ಞಾನ ಬಳಸಿ ಬೋಧನೆ ಮಾಡಬಹುದು ಎಂಬುದರ ಬಗ್ಗೆ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.