ADVERTISEMENT

ನಿಫಾ ಶಂಕೆ: ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾದ ಗೋವಾ ಮೂಲದ ವ್ಯಕ್ತಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 20:43 IST
Last Updated 14 ಸೆಪ್ಟೆಂಬರ್ 2021, 20:43 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮಂಗಳೂರು: ನಿಫಾ ಸೋಂಕಿನ ಶಂಕೆಯಲ್ಲಿ ಗೋವಾದ ವ್ಯಕ್ತಿಯೊಬ್ಬರು ಇಲ್ಲಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗೋವಾದಲ್ಲಿ ಆರ್‌ಟಿಪಿಸಿಆರ್ ಕಿಟ್ ತಯಾರಿಸುವ ಪ್ರಯೋಗಾಲಯದಲ್ಲಿ ಮೈಕ್ರೊ ಬಯಾಲಜಿಸ್ಟ್ ಆಗಿರುವ ಕಾರವಾರದ ವ್ಯಕ್ತಿ, ಹಬ್ಬಕ್ಕೆ ಬೈಕ್‌ನಲ್ಲಿ ಊರಿಗೆ ಬರುವಾಗ ಮಳೆಯಲ್ಲಿ ನೆನೆದಿದ್ದರು. ಮರುದಿನ ಜ್ವರ ಬಂದಿದ್ದು, ತಲೆನೋವು, ಹೃದಯ ಬಡಿತದಲ್ಲಿ ಏರಿಳಿತ ಕಂಡ ಅವರು ರೋಗಲಕ್ಷಣಗಳ ಬಗ್ಗೆ ಗೂಗಲ್‌ನಲ್ಲಿ ಹುಡುಕಾಟ ಮಾಡಿದ್ದಾರೆ. ಜ್ವರದ ಲಕ್ಷಣ ಆಧರಿಸಿ, ನಿಫಾ ಎಂದು ಶಂಕಿಸಿ, ಮುನ್ನೆಚ್ಚರಿಕೆಯಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯಲ್ಲಿ ನಿಫಾ ಸೋಂಕಿನ ಲಕ್ಷಣ ಇಲ್ಲ. ಆದರೂ, ನಿರ್ಲಕ್ಷ್ಯ ಮಾಡಬಾರದೆಂದು, ಗಂಟಲು
ದ್ರವ, ರಕ್ತ, ಮೂತ್ರದ ಮಾದರಿಯನ್ನು ಪರೀಕ್ಷೆಗಾಗಿ ಪುಣೆಗೆ ಕಳುಹಿಸಲಾಗಿದೆ. ವ್ಯಕ್ತಿಯ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದ್ದು, ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.