ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಂಗಳವಾರ ಬೆಳಗಿನ ಜಾವ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಅಜ್ಞಾತ ಸ್ಥಳದಲ್ಲಿ ಬಂಧಿತರ ತೀವ್ರ ವಿಚಾರಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಂಧನ ಸುದ್ದಿಯನ್ನು ಖಚಿತಪಡಿಸಿದ್ದು, ಕೇರಳದಿಂದ ಉಡುಪಿಗೆ ಬಂದಿದ್ದ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸ್ಥಳೀಯ ಪೊಲೀಸರು ಬಂಧಿತರ ವಿವರವನ್ನು ಬಹಿರಂಗಪಡಿಸಿಲ್ಲ.
ಈ ಮಧ್ಯೆ ಉಡುಪಿಯಲ್ಲಿ ಜ.18ರಂದು ಪರ್ಯಾಯ ಮಹೋತ್ಸವ ನಡೆಯುತ್ತಿದ್ದು, ಸಾವಿರಾರು ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಭದ್ರತೆ ಬಿಗಿಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.