ADVERTISEMENT

ಅಮಾನತು: ಕೋರ್ಟ್‌ ಮೆಟ್ಟಿಲೇರಲು ಇಬ್ರಾಹಿಂ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 16:42 IST
Last Updated 22 ನವೆಂಬರ್ 2023, 16:42 IST
ಸಿ.ಎಂ. ಇಬ್ರಾಹಿಂ
ಸಿ.ಎಂ. ಇಬ್ರಾಹಿಂ   

ಬೆಂಗಳೂರು: ‘ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಅಮಾನತು ಮಾಡಿರುವ ಕ್ರಮ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರುತ್ತಿರುವೆ’ ಎಂದು ಸಿ.ಎಂ. ಇಬ್ರಾಹಿಂ ಹೇಳಿದರು.

ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮುಲಾಯಂ ಸಿಂಗ್‌ ಯಾದವ್‌ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ತೆಗೆದುಕೊಂಡ ನಿರ್ಧಾರ ಪಕ್ಷದ ನಿಯಮಗಳಿಗೆ ವಿರುದ್ಧವಾಗಿದೆ. ಇದೇ ನ. 23 ರಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದರು.

ADVERTISEMENT

ಈ ಕುರಿತು ಹಾಗೂ ಬಿಜೆಪಿ ಜತೆಗಿನ ಸಖ್ಯ ಸೇರಿದಂತೆ ಪಕ್ಷದ ಈಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಡಿ.9 ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ರಾಷ್ಟ್ರೀಯ ನಾಯಕರ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯ ನಂತರ ಮುಂದಿನ ಹೆಜ್ಜೆಗಳ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.