ಬೆಂಗಳೂರು: ರೆಮ್‌ಡಿಸಿವಿರ್ಔಷಧದ ಸಮರ್ಪಕ ಪೂರೈಕೆ ಸಲುವಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ಅನ್ನು ನೋಡಲ್ ಏಜೆನ್ಸಿಯನ್ನಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಅವರು,ಸರ್ಕಾರಿ ಆಸ್ಪತ್ರೆಗಳಿಗೆ ಹಾಗೂ ಸರ್ಕಾರ ಶಿಫಾರಸ್ಸು ಮಾಡಿರುವ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಅವಶ್ಯಕ ರೆಮ್‌ಡಿಸಿವಿರ್ಔಷಧ ಸರಬರಾಜು ಮಾಡಲು ಎಸ್‌ಎಎಸ್‌ಟಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದಿದ್ದಾರೆ.
ಸ್ವಯಂ ಪ್ರೇರಿತರಾಗಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸೋಂಕಿತರ ಚಿಕಿತ್ಸೆಗೆ ರೆಮ್‌ಡಿಸಿವಿರ್ಔಷಧ ಪೂರೈಸಲುಉಪ ಔಷಧ ನಿಯಂತ್ರಕರಾದಕೆಂಪಯ್ಯ ಸುರೇಶ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.ಖಾಸಗಿ ಆಸ್ಪತ್ರೆಗಳು ಸೋಂಕಿತರ ಎಸ್‌ಆರ್‌ಎಫ್ ಐಡಿ ಮುಂತಾದ ವಿವರಗಳನ್ನು ಇಮೇಲ್ ಅಥವಾ ವಾಟ್ಸ್‌ಆ್ಯಪ್ ಮೂಲಕ ಒದಗಿಸಿ ಔಷಧ ಪಡೆಯಬಹುದಾಗಿದೆ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.