ADVERTISEMENT

ಸಿದ್ಧಗಂಗಾಮಠ: ಶಿವಕುಮಾರ ಸ್ವಾಮೀಜಿ 112ನೇ ಜಯಂತಿ ಇಂದು

1 ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2019, 23:59 IST
Last Updated 31 ಮಾರ್ಚ್ 2019, 23:59 IST
ಶಿವಕುಮಾರ ಸ್ವಾಮೀಜಿ
ಶಿವಕುಮಾರ ಸ್ವಾಮೀಜಿ   

ತುಮಕೂರು: ಭಕ್ತರ ಪಾಲಿನ ‘ನಡೆದಾಡುವ ದೇವರು’ ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 112ನೇ ಜಯಂತಿ ಮತ್ತು ಗುರುವಂದನೆ ಕಾರ್ಯಕ್ರಮ ಸೋಮವಾರ (ಏಪ್ರಿಲ್ 1) ಮಠದ ಆವರಣದಲ್ಲಿ ನಡೆಯಲಿದ್ದು, ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಕಾರ್ಯಕ್ರಮಕ್ಕಾಗಿ ಮಠದ ಆಡಳಿತ ಮಂಡಳಿಯು ಸಕಲ ಸಿದ್ಧತೆ ಮಾಡಿದೆ. ಮಠದ ಆವರಣ ಪುಷ್ಪಾಲಂಕಾರ, ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ಸೋಮವಾರ ಬೆಳಿಗ್ಗೆ ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಅವರು ಉದ್ಧಾನಶ್ರೀಗಳ ಗದ್ದುಗೆ, ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಹಾಮಂಗಳಾರತಿ ನೆರವೇರಿಸಲಿದ್ದಾರೆ.

ADVERTISEMENT

ಬೆಳಿಗ್ಗೆ 10 ಗಂಟೆಗೆ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆ ಮೆರವಣಿಗೆ ನಡೆಯಲಿದ್ದು, 10.30ಕ್ಕೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೈಸೂರಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಉಡುಪಿ ಪೇಜಾವರಮಠದ ವಿಶ್ವೇಶತೀರ್ಥ ಸ್ವಾಮೀಜಿ, ಚಿತ್ರದುರ್ಗ ಶಿವಮೂರ್ತಿ ಮುರುಘಾ ಶರಣರು, ಉಜ್ಜಯಿನಿ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಮುಂಡರಗಿ ಸಂಸ್ಥಾನಮಠದ ಅನ್ನದಾನ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ರಾಜಕೀಯ ಪಕ್ಷಗಳ ಮುಖಂಡರು, ಜನಪ್ರತಿನಿಧಿ
ಗಳನ್ನು ಮಠವು ಅತಿಥಿಗಳನ್ನಾಗಿ ಆಹ್ವಾನಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.