ADVERTISEMENT

ದುಬೈನಿಂದ ಉಡುಪಿಗೆ ಬಂದಿದ್ದ ಗರ್ಭಿಣಿಯಲ್ಲಿ ಕೋವಿಡ್‌–19 ಸೋಂಕಿನ ಲಕ್ಷಣಗಳು!

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 14:01 IST
Last Updated 16 ಮಾರ್ಚ್ 2020, 14:01 IST
   

ಉಡುಪಿ: ಈಚೆಗೆ ದುಬೈನಿಂದ ಬಂದಿದ್ದ ಮಹಿಳೆಗೆ ಶಂಕಿತ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾರ್ಚ್ 13 ರಂದು ದುಬೈನಿಂದ ಉಡುಪಿಗೆ ಮರಳಿದ್ದ 26 ವರ್ಷದ ಮಹಿಳೆಗೆ ಕೆಮ್ಮು ಕಾಣಿಸಿಕೊಂಡಿತ್ತು. ಮಹಿಳೆಯ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ವರದಿ ನಿರೀಕ್ಷೆಯಲ್ಲಿದ್ದೇವೆ ಎಂದು ಡಿಎಚ್‌ಒ ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT