ADVERTISEMENT

ವಿವಾದಾತ್ಮಕ ಹೇಳಿಕೆ: ಶಾಸಕ ರೇಣುಕಾಚಾರ್ಯ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 10:27 IST
Last Updated 10 ಏಪ್ರಿಲ್ 2020, 10:27 IST
ಎಂ.ಪಿ.ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ   
""

ದಾವಣಗೆರೆ: ವಿವಾದಾತ್ಮಕ ಹೇಳಿಕೆ ನೀಡಿದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಸುಭಾಶ್ ಚಂದ್ರ ಇಲ್ಲಿನ ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸದ ತಬ್ಲೀಗಿಗಳನ್ನು ಗುಂಡಿಕ್ಕಿ‌ ಕೊಂದರು ತಪ್ಪಲ್ಲ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾರ್ಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ರೇಣುಕಾಚಾರ್ಯ ಶಾಂತಿ ಕದಡುವಂತಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ವಿರುದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT
ದೂರಿನ ಪ್ರತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.