
ಪ್ರಜಾವಾಣಿ ವಾರ್ತೆ
ಬೆಂಗಳೂರು: ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಿದ ಆರೋಪಿ ವಿರುದ್ಧ ಗೂಂಡಾ ಕಾಯ್ದೆಯನ್ವಯ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.
ಮುಂದೆಂದೂ ಇಂತಹ ಘಟನೆ ಸಂಭವಿಸದಂತೆ ಎಚ್ಚರವಹಿಸುವ ಅಗತ್ಯವಿದೆ. ಅದಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಅವರು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.
‘ಈ ವಿಚಾರವಾಗಿ ಜಿಲ್ಲಾಧಿಕಾರಿ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ’ ಎಂದು ತಿಳಿಸಿದರು.
ಮುಖ್ಯಮಂತ್ರಿಯವರ ಘೋಷಣೆ ಪ್ರಕಾರ, ಮೃತರ ಕುಟುಂಬಕ್ಕೆ ತಕ್ಷಣವೇ ₹25 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.