ADVERTISEMENT

‘ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಿ’

ಸಚಿವ ಶ್ರೀರಾಮುಲುಗೆ ರಘು ಆಚಾರ್‌ ಪತ್ರ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 19:54 IST
Last Updated 1 ಅಕ್ಟೋಬರ್ 2020, 19:54 IST
ರಘು ಆಚಾರ್
ರಘು ಆಚಾರ್   

ಬೆಂಗಳೂರು: ಕೊರೊನಾ ರೋಗಿಗಳಿಂದ ನಿಯಮ ಮೀರಿ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ವಿಧಾನ ಪರಿಷತ್‌ ಸದಸ್ಯ ರಘು ಆಚಾರ್‌ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಗುರುವಾರ ಪತ್ರದ ಮೂಲಕ ಆಗ್ರಹಿಸಿದ್ದಾರೆ.

‘ನಿತ್ಯವೂ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯ ಸರ್ಕಾರಚಿಕಿತ್ಸಾ ಶುಲ್ಕ ನಿಗದಿ ಮಾಡಿದ್ದರೂ ಖಾಸಗಿ ಆಸ್ಪತ್ರೆಗಳು ಅದನ್ನು ಪಾಲಿಸುತ್ತಿಲ್ಲ. ಕೆಲವು ಆಸ್ಪತ್ರೆಗಳು ಜನರನ್ನು ಸುಲಿಗೆ ಮಾಡುತ್ತಿವೆ. ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರಿಂದ ₹ 1.5 ಲಕ್ಷ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರಿಂದ ₹ 6.5 ಶುಲ್ಕ ಪಡೆದಿರುವ ವಿಷಯ ವಿಧಾನಸಭೆಯಲ್ಲೇ ಪ್ರಸ್ತಾಪವಾಗಿದೆ. ಶಾಸಕರ ಗತಿಯೇ ಹೀಗಾದರೆ ಜನಸಾಮಾನ್ಯರ ಪಾಡೇನು’ ಎಂದು ಅವರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಕೋವಿಡ್‌ ನಿಯಂತ್ರಣ ಕಾರ್ಯಪಡೆಗಳು ಆರಂಭ ಶೂರತ್ವ ತೋರಿ ಸುಮ್ಮನಾಗಿವೆ. ಕಾರ್ಯಪಡೆಯಲ್ಲಿದ್ದ ಐಪಿಎಸ್‌ ಅಧಿಕಾರಿಯೊಬ್ಬರು ಖಾಸಗಿ ಆಸ್ಪತ್ರೆಗಳು ಪಡೆಯುವ ಹೆಚ್ಚುವರಿ ಹಣವನ್ನು ವಾಪಸ್‌ ಕೊಡಿಸುವುದಾಗಿ ಘೋಷಿಸಿದ್ದರು. ಈಗ ಅಂತಹ ಕೆಲಸ ಆಗುತ್ತಿಲ್ಲ. ನಿಯಮ ಮೀರಿ ಹೆಚ್ಚುವರಿ ಹಣ ಸುಲಿಗೆ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ರಘು ಆಚಾರ್‌ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.