ADVERTISEMENT

ಸಾವಿರ ಜನಕ್ಕೆ ಸೀಮಿತವಾಗಿ ಪಂಚಲಿಂಗ ದರ್ಶನ: ಬಿ.ಎಸ್‌.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 21:31 IST
Last Updated 25 ನವೆಂಬರ್ 2020, 21:31 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ    

ಮೈಸೂರು: ಕೋವಿಡ್‌–19 ಪರಿಸ್ಥಿತಿಯಿಂದಾಗಿ ಒಂದು ಸಾವಿರ ಜನರಿಗೆ ಸೀಮಿತಗೊಳಿಸಿ, ಈ ಬಾರಿ ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ಆಯೋಜಿಸಲು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬುಧವಾರ ಜಿಲ್ಲೆಯ ತಲಕಾಡಿನಲ್ಲಿ ನಡೆದ ಪಂಚಲಿಂಗ ದರ್ಶನ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

‘ಪಂಚಲಿಂಗ ದರ್ಶನಕ್ಕೆ ಅಗತ್ಯವಿರುವ ಕೆಲಸ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕು. ತಲಕಾಡು ಅಭಿವೃದ್ಧಿಗೆ ಬೇಕಾಗುವ ಶಾಶ್ವತ ಕೆಲಸಗಳನ್ನು ನಂತರ ಕೈಗೆತ್ತಿಕೊಳ್ಳಿ. ತರಾತುರಿಯಲ್ಲಿ ಮಾಡುವುದು ಬೇಡ’ ಎಂದು ಯಡಿಯೂರಪ್ಪ ಸೂಚನೆ ನೀಡಿದರು.

ಪಂಚಲಿಂಗ ದರ್ಶನ ಕಾರ್ಯಕ್ರಮಗಳು ಡಿ.10 ರಿಂದ 19ರ ವರೆಗೆ ನಡೆಯಲಿವೆ. ಡಿ.14 ರಂದು ಪಂಚಲಿಂಗ ದರ್ಶನ ಮಹೋತ್ಸವ ಇರಲಿದೆ. 2013 ರಲ್ಲಿ ಕೊನೆಯದಾಗಿ ನಡೆದಿದ್ದಪಂಚಲಿಂಗ ದರ್ಶನ ಮಹೋತ್ಸವದಲ್ಲಿ ಸುಮಾರು 20 ಲಕ್ಷ ಜನ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.