ADVERTISEMENT

ತಲಕಾಡು ಇನ್ನು ಪಟ್ಟಣ ಪಂಚಾಯಿತಿ: ಸಚಿವ ಸಂಪುಟ ಸಭೆ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 16:28 IST
Last Updated 7 ಆಗಸ್ಟ್ 2025, 16:28 IST
ಎಚ್‌.ಕೆ.ಪಾಟೀಲ
ಎಚ್‌.ಕೆ.ಪಾಟೀಲ   

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳನ್ನು ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಗ್ರಾಮ ಪಂಚಾಯಿತಿಯಾಗಿರುವ ತಲಕಾಡಿಗೆ ಬಿ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಟಿ.ಬೆಟ್ಟಹಳ್ಳಿ ಮತ್ತು ಕೂರಬಾಳನ ಹುಂಡಿ ಗ್ರಾಮಗಳನ್ನು ಸೇರಿಸಿ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ ನೀಡಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ರಾಜ್ಯದ 15 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ 15 ಮಹಿಳಾ ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ₹87.60 ಕೋಟಿ ಪರಿಷ್ಕೃತ ಅಂದಾಜಿಗೆ ಸಂಪುಟ ಒಪ್ಪಿಗೆ ನೀಡಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.