ಬೆಂಗಳೂರು: ಸಿಬಿಐ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ದೂರವಾಣಿ ಕರೆ ಮಾಡಿ ಅವರಿಂದ ₹5.80 ಲಕ್ಷ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಂಟು ತಿಂಗಳಿಂದ ಜೈಲಿನಲ್ಲಿದ್ದ ತಮಿಳುನಾಡಿನ ಶಿಕ್ಷಕರೊಬ್ಬರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ತಿರುವಾರೂರ್ ನ ಕೆ.ಅರಿವೊಳಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
"ಆರೋಪಿ ಶಾಲಾ ಶಿಕ್ಷಕರಿದ್ದಾರೆ. ಅವರ ವಿರುದ್ಧದ ಅಪರಾಧ ಪ್ರಕರಣಗಳಿಗೆ ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. ಈಗಾಗಲೇ ತನಿಖೆ ಪೂರ್ಣಗೊಂಡು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕಾರಣ ಅವರನ್ನು ಬಂಧನದಲ್ಲಿ ಮುಂದುವರಿಸುವ ಅಗತ್ಯ ಇಲ್ಲ" ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣವೇನು?: ಮಂಗಳೂರಿನ ಚಂದನ ಉಪ್ಪಿನ 2024ರ ಆಗಸ್ಟ್ 8ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನ ತನಿಖೆ ನಡೆಸಿದ್ದ ಪೊಲೀಸರು, 2024ರ ನವೆಂಬರ್ 8ರಂದು ಅರಿವೊಳಿಯನ್ನು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.