ADVERTISEMENT

ಕಾಸರಗೋಡು | ಕನ್ನಡ ಶಿಕ್ಷಕರ ನೇಮಕಕ್ಕೆ ಸೂಚನೆ: ತಂಗಡಗಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2023, 16:32 IST
Last Updated 25 ಆಗಸ್ಟ್ 2023, 16:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಾಸರಗೋಡು ಜಿಲ್ಲೆ ಅಡೂರು ಕನ್ನಡ ಶಾಲೆಗೆ ಕನ್ನಡ ಭಾಷಾ ಶಿಕ್ಷಕರನ್ನು ನೇಮಿಸುವಂತೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿರುವುದು ಸಂತಸ ತಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಆ ಶಾಲೆಯಲ್ಲಿ ಮಲೆಯಾಳ ಭಾಷಾ ಶಿಕ್ಷಕಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಉದುಮ ಹಾಗೂ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ವಿಭಾಗಗಳಿಗೂ ಮಲೆಯಾಳ ಭಾಷೆಯ ಸಮಾಜ ವಿಜ್ಞಾನ ಶಿಕ್ಷಕರನ್ನು ನೇಮಿಸಲಾಗಿತ್ತು. ವಿದ್ಯಾರ್ಥಿಗಳು, ಪೋಷಕರು, ಗಡಿನಾಡ ಕನ್ನಡ ಹೋರಾಟಗಾರರು ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದರು ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT