ADVERTISEMENT

ಜುಲೈ 11ರಂದು ಕರ್ನಾಟಕದ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್‌ ಪ್ರಮಾಣ ವಚನ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 8:51 IST
Last Updated 9 ಜುಲೈ 2021, 8:51 IST
 ತಾವರ್‌ಚಂದ್ ಗೆಹ್ಲೋಟ್‌
ತಾವರ್‌ಚಂದ್ ಗೆಹ್ಲೋಟ್‌   

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್‌ ಅವರು ಜುಲೈ 11ರಂದು (ಭಾನುವಾರ) ಬೆಳಿಗ್ಗೆ 10:30ಕ್ಕೆ ರಾಜ ಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ. ಹಾಲಿ ರಾಜ್ಯಪಾಲ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದೆ.

ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದ ತಾವರ್‌ಚಂದ್‌ ಅವರು ಇತ್ತೀಚೆಗಷ್ಟೇ ರಾಜಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.

ADVERTISEMENT

ತಾವರ್‌ಚಂದ್‌ ಗೆಹ್ಲೋಟ್, ಮಧ್ಯಪ್ರದೇಶದ ನಾಗ್ಡಾದವರು. ಮೂರು ಬಾರಿ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಗೆಹ್ಲೋಟ್‌, ರಾಜ್ಯಸಭೆಯ ಸದಸ್ಯರಾಗಿದ್ದರು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.