ADVERTISEMENT

ಕೃಷಿ ಕಾಯ್ದೆ: ರಾಜ್ಯದಿಂದ ನ್ಯಾಯಾಂಗ ನಿಂದನೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 21:55 IST
Last Updated 15 ಫೆಬ್ರುವರಿ 2021, 21:55 IST
ಟಿ.ಬಿ.ಜಯಚಂದ್ರ
ಟಿ.ಬಿ.ಜಯಚಂದ್ರ   

ಶಿರಾ: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಅನುಷ್ಠಾನ ಮಾಡುವ ಮೂಲಕ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶ ಉಲ್ಲಂಘಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡುತ್ತಿದೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಆರೋಪಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಒತ್ತಾಯಿಸಿ ರೈತರು 80 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಈ ಬಗ್ಗೆ ದಾವೆ ನಡೆಯುತ್ತಿದೆ ಎಂದುಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜ.12 ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಂದಿನ ಆದೇಶದವರೆಗೆ ಮೂರು ಕಾಯ್ದೆಗಳನ್ನು ಜಾರಿಗೊಳಿಸದಂತೆ ತಡೆಯಾಜ್ಞೆ ನೀಡಿದೆ. ಕೋರ್ಟ್‌ತಡೆಯಾಜ್ಞೆ ಇದ್ದರೂ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ಮುಂದಾಗುವ ಮೂಲಕ ನ್ಯಾಯಾಲಯದ ಅದೇಶಕ್ಕೆ ಕಿಂಚಿತ್ತು ಗೌರವ ನೀಡಿಲ್ಲ ಎಂದು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.