ADVERTISEMENT

ಶಿಕ್ಷಕರ ಅರ್ಹತಾ ಪರೀಕ್ಷೆ: ಶೇ 19.51ರಷ್ಟು ಅಭ್ಯರ್ಥಿಗಳು ತೇರ್ಗಡೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 19:37 IST
Last Updated 13 ಸೆಪ್ಟೆಂಬರ್ 2021, 19:37 IST
   

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ಆಗಸ್ಟ್‌ 22ರಂದು ನಡೆದ ಕರ್ನಾಟಕ- ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಕೆ-ಟಿಇಟಿ) ಶೇ 19.51ರಷ್ಟು ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ.

ಈ ಬಾರಿ 2.31 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ, 45,074 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಕಳೆದ ವರ್ಷ ಶೇ 3.93 ರಷ್ಟು ಫಲಿತಾಂಶ ಬಂದಿತ್ತು.ಪತ್ರಿಕೆ– 1ರಲ್ಲಿ (ಒಂದರಿಂದ 5ನೇ ತರಗತಿಗೆ ಬೋಧಿಸುವ ಶಿಕ್ಷಕರಿಗಾಗಿ) 13,639 ಮಂದಿ ಶೇ 60ಕ್ಕಿಂತ ಹೆಚ್ಚು ಹಾಗೂ ಪತ್ರಿಕೆ– 2ರಲ್ಲಿ (6–8ನೇ ತರಗತಿಗೆ ಬೋಧಿಸುವ ಶಿಕ್ಷಕರಿಗಾಗಿ) 19,523 ಅಭ್ಯರ್ಥಿಗಳು ಶೇ 60ರಷ್ಟು ಅಂಕ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT