
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವ ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಇಲಾಖೆ ಜ.1ರಿಂದ ಆರಂಭಿಸಲಿದೆ.
ಮುಖ್ಯ ಶಿಕ್ಷಕರ ಜ್ಯೇಷ್ಠತಾ ಪಟ್ಟಿ ಪ್ರಕಟಿಸಿದ ನಂತರ ವಿವಿಧ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಕೌನ್ಸೆಲಿಂಗ್ ಮೂಲಕ ಬಡ್ತಿ ನೀಡಿ, ಸ್ಥಳ ನಿಯೋಜನೆ ಮಾಡಲಾಗುವುದು. ಜ.31ರ ಒಳಗೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.