ADVERTISEMENT

‘ಪುಳಿಯೊಗರೆ’ ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 20:15 IST
Last Updated 17 ಜನವರಿ 2020, 20:15 IST

ಸಕಲೇಶಪುರ: ‘ಪುಳಿಯೊಗರೆ’ ಪದವನ್ನು ತಪ್ಪಾಗಿ ಉಚ್ಛಾರಣೆ ಮಾಡಿದ ವಿದ್ಯಾರ್ಥಿನಿಯ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ್ದ, ತಾಲ್ಲೂಕಿನ ಕಬ್ಬಿನಗದ್ದೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಸ್.ನಿರ್ವಾಣಪ್ಪ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.

ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿಗೆ ‘ಪುಳಿಯೊಗರೆ’ ಪದ ಹೇಳುವಂತೆ ಸೂಚಿಸಿದ್ದಾರೆ. ವಿದ್ಯಾರ್ಥಿನಿಯು ಪದವನ್ನು ಉಚ್ಛರಿಸಲು ತಡವರಿಸಿದಾಗ ಉಳಿದ ವಿದ್ಯಾರ್ಥಿಗಳು ಜೋರಾಗಿ ನಕ್ಕಿದ್ದಾರೆ. ಇದರ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಜ. 16ರಂದು ಹಂಚಿಕೆ ಮಾಡಿದ್ದಾರೆ.

ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು ಒತ್ತಾಯಿಸಿದ್ದರು.

ADVERTISEMENT

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಸೂಚನೆ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಬಿ.ಶಿವಾನಂದ, ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಈ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.