ಬೆಂಗಳೂರು: ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಇದೇ 23ರಿಂದ ಮುಂದುವರಿಸಲಾಗುತ್ತದೆ. ವರ್ಗಾವಣಾವೇಳಾಪಟ್ಟಿಯನ್ನು ಇಲಾಖೆಯ ವೆಬ್ಸೈಟ್ನಲ್ಲಿ (http://schooleducation.kar.nic.in) ನೀಡಲಾಗಿದೆ. ಕೌನ್ಸೆಲಿಂಗ್ನಲ್ಲಿ ಭಾಗವಹಿಸುವ ಶಿಕ್ಷಕರಿಗೆ ಪ್ರತ್ಯೇಕವಾಗಿ ಸೂಚನೆ ನೀಡಲಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆ.ಜಿ.ಜಗದೀಶ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.