ADVERTISEMENT

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದಕ್ಕೆ

ಮೂವ್‌ಮೆಂಟ್‌ ಆದೇಶ: ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2019, 19:09 IST
Last Updated 23 ಸೆಪ್ಟೆಂಬರ್ 2019, 19:09 IST
   

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಕಾರಣ ಶಿಕ್ಷಕರ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡ
ಲಾಗಿದ್ದು, ಈಗಾಗಲೇ ವರ್ಗಾವಣೆ ಕೌನ್ಸೆಲಿಂಗ್ ಮುಗಿಸಿರುವ ಶಿಕ್ಷಕರಿಗೆ ಮೂವ್‌ಮೆಂಟ್‌ ಆದೇಶಕೊಟ್ಟಿರುವ ವಿರುದ್ಧ ಕೆಲವು ಶಿಕ್ಷಕರು ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಮೂವ್‌ಮೆಂಟ್‌ ಆದೇಶಕ್ಕೆ ಸಂಬಂಧಿಸಿದಂತೆಸೋಮವಾರ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ
ಯನ್ನು ಗುರುವಾರಕ್ಕೆ ಮುಂದೂಡಲಾಯಿತು.

‘ವರ್ಗಾವಣಾ ಪ್ರಕ್ರಿಯೆ ಮುಂದುವರಿಸಲು ಲಿಖಿತ ಅನುಮತಿ ನೀಡುವಂತೆ ಚುನಾವಣಾ ಆಯೋಗ
ವನ್ನು ಕೇಳಿಕೊಳ್ಳಲಾಗಿದೆ. ಅನುಮತಿ ಸಿಗುವವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ಕೆ. ಜಿ. ಜಗದೀಶ್‌ ತಿಳಿಸಿದ್ದಾರೆ.

ADVERTISEMENT

ಈ ಮಧ್ಯೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ. ಎಂ. ನಾರಾಯಣ ಸ್ವಾಮಿ ಅವರು ಸೋಮವಾರ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್‌ ಕುಮಾರ್‌ ಅವರನ್ನು ಭೇಟಿ ಮಾಡಿ, ಈಗಾಗಲೇ ಶೇಕಡ 70ರಷ್ಟು ವರ್ಗಾವಣೆ ಪ್ರಕ್ರಿಯೆ ಕೊನೆಗೊಂಡಿರುವುದರಿಂದ ಉಳಿದ ಪ್ರಕ್ರಿಯೆಯನ್ನು ಶೀಘ್ರ ಕೊನೆಗೊಳಿಸುವುದಕ್ಕೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.