ಬೆಂಗಳೂರು: ನವೆಂಬರ್ ಐದರಿಂದ ಶಿಕ್ಷಕರ ವರ್ಗಾವಣಾ ಪ್ರಕ್ತಿಯೆ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈಗಾಗಲೇ ಭರವಸೆ ನೀಡಿದಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದೆ. ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ. ನಾಳೆ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.