ADVERTISEMENT

ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 19:45 IST
Last Updated 12 ಜುಲೈ 2019, 19:45 IST
   

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

ತಂತ್ರಾಂಶದಲ್ಲಿನ ದೋಷ ಮತ್ತು ಕೆಲವು ಶಿಕ್ಷಕರು ನಕಲಿ ದಾಖಲೆ ಸೃಷ್ಟಿಸಿ ವರ್ಗಾವಣೆಗೆ ಯತ್ನಿಸಿದ್ದ ಕಾರಣ ಈ ಪರಿಷ್ಕೃತ ವೇಳಾಪಟ್ಟಿ ಸಿದ್ಧಪಡಿಸಲಾಗಿದ್ದು, ಶುಕ್ರವಾರದಿಂದ ಕಡ್ಡಾಯ ವರ್ಗಾವಣೆಗೆ ಕೌನ್ಸೆಲಿಂಗ್ ಆರಂಭವಾಗಿದೆ.

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಜೂನ್‌ 12ರಂದು ಆರಂಭವಾಗಿತ್ತು. ಆದರೆ ಟಿಡಿಎಸ್‌ ತಂತ್ರಾಂಶ ಸಮಸ್ಯೆಯಿಂದಾಗಿ ವರ್ಗಾವಣೆ ಪ್ರಕ್ರಿಯೆಗೆ ತೊಡಕಾಗಿತ್ತು. ಈಗಾಗಲೇ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪೂರ್ಣಗೊಂಡಿದೆ.

ADVERTISEMENT

ಪರಿಷ್ಕೃತ ವರ್ಗಾವಣೆ ಪಟ್ಟಿಯನ್ನುwww.schooleducation.kar.nic.in ಇಲ್ಲಿ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.