ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆಗೆ ಶಿಕ್ಷಕರ ನಿಯೋಜನೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 17:41 IST
Last Updated 30 ನವೆಂಬರ್ 2022, 17:41 IST
   

ಬೆಂಗಳೂರು: ಮತಗಟ್ಟೆ ಹಂತದ ಅಧಿಕಾರಿಗಳಾಗಿ ನಿಯೋಜಿತವಾಗಿರುವ ಶಿಕ್ಷಕರು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಬೇಕು ಎಂದುಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.

ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳಿಗೆ ಈಗಾಗಲೇ ನಿಯೋಜನೆ ಮಾಡಲಾಗಿದ್ದು, ಸೂಕ್ತ ತರಬೇತಿ ನೀಡಲಾಗಿದೆ. ಡಿ.12ರವರೆಗೆ ಮನೆಮನೆ ಸಮೀಕ್ಷಾ ಕಾರ್ಯ ನಡೆಯಲಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಎಲ್‌ಒಗಳು ಕಾರ್ಯನಿರ್ವಹಿಸಬೇಕು. ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಆಯುಕ್ತ ಆರ್.ವಿಶಾಲ್ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT