ADVERTISEMENT

ಶಿಕ್ಷಕರ ಸಮಸ್ಯೆ: ಆಯುಕ್ತರ ಜತೆ ಚರ್ಚೆ ನಡೆಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

​ಪ್ರಜಾವಾಣಿ ವಾರ್ತೆ
Published 21 ಮೇ 2020, 11:17 IST
Last Updated 21 ಮೇ 2020, 11:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   


ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆ.ಜಿ. ಜಗದೀಶ್ ಅವರನ್ನು ಗುರುವಾರ ಇಲ್ಲಿ ಭೇಟಿ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗ, ಶಿಕ್ಷಕರ ಅನೇಕ ಸಮಸ್ಯೆಗಳ ಬಗ್ಗೆ ಸುಮಾರು ಎರಡು ಗಂಟೆಗೂ ಹೆಚ್ಚು ಸಮಯ ಸುದೀರ್ಘವಾದ ಚರ್ಚೆ ನಡೆಸಿತು.

ಶಾಲೆ ಪುನರಾರಂಭದ ಬಗ್ಗೆ ಹಾಗೂ ಶಾಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಂಘದಿಂದ ಹಲವಾರು ಸಲಹೆಗಳನ್ನು ನೀಡಿ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಸಂಘದ ಹಲವಾರು ಸಲಹೆಗಳು ಉತ್ತಮವಾಗಿದ್ದು ಸೂಕ್ತ ಸುತ್ತೋಲೆ ಹೊರಡಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ADVERTISEMENT

ಇದೇ ವೇಳೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪ್ರಾರಂಬಿಸಲು ಒತ್ತಾಯಿಸಲಾಯಿತು.

ರಾಜ್ಯದ ಹಲವಾರು ಶಿಕ್ಷಕರ ಫೆಬ್ರುವರಿ ತಿಂಗಳ ವೇತನ ಸಂಬಂದಿಸಿದಂತೆ ಹೆಚ್ಚುವರಿ ಅನುದಾನಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ವಿನಂತಿಸಲಾಯಿತು.

ಪದವೀಧರ ಶಿಕ್ಷಕರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಕೋರಲಾಯಿತು.

ಪ್ರಾಥಮಿಕ ಶಾಲೆಯಿಂದ ಮುಖ್ಯ ಗುರುಗಳ ಹುದ್ದೆ, ಎಚ್.ಎಂ ಹುದ್ದೆಯಿಂದ ಎಂಪಿಎಸ್ ಎಚ್.ಎಂ ಹುದ್ದೆಗೆ ಹಾಗೂ ಫ್ರೌಡ ಶಾಲಾ ಸಹ ಶಿಕ್ಷಕರ ಹುದ್ದೆಗಳಿಗೆ ಬಡ್ತಿ ನೀಡುವ ಕುರಿತು ವಿಸ್ತೃತ ಚರ್ಚೆ ಮಾಡಲಾಯಿತು.

ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಟಿವಿ ಮಾಧ್ಯಮದ ಮೂಲಕ ರಾಜ್ಯಾದ್ಯಂತ ಮಕ್ಕಳಿಗೆ ಪಾಠ ಬೋಧನೆ ಮಾಡುವ ಬಗ್ಗೆ ಚರ್ಚಿಸಿಲಾಯಿತು.

ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಏಕರೂಪದ ವೇಳಾಪಟ್ಟಿ ಹಾಗೂ ಬೋಧನಾ ವ್ಯವಸ್ಥೆಯ ಬಗ್ಗೆ ಮಾತುಕತೆ ಮಾಡಲಾಯಿತು.

ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಸಂಘಟನಾ ಕಾರ್ಯದರ್ಶಿ ಕೆ.ಯುವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.