ADVERTISEMENT

ಶಿಕ್ಷಕರ ವೇತನ ವಿಳಂಬ?

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2019, 20:15 IST
Last Updated 12 ಅಕ್ಟೋಬರ್ 2019, 20:15 IST
   

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಮೂಲಕ ವೇತನ ಪಡೆಯುವ ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಬಿಸಿಯೂಟ ಕಾರ್ಮಿಕರಿಗೆ ಮುಂದಿನ ತಿಂಗಳು ವೇತನ ಸಿಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ.

ಶನಿವಾರವರಷ್ಟೇ ಧನವಿನಿಯೋಗ ಮಸೂದೆಗೆ ಒಪ್ಪಿಗೆ ದೊರೆತಿದೆ. ಹೀಗಾಗಿ ಅಕ್ಟೋಬರ್‌ ತಿಂಗಳ ವೇತನ ಸಿಗುವಾಗ ಕೆಲವು ದಿನ ವಿಳಂಬವಾಗಬಹುದು. ಇದಕ್ಕೆ ಅವಕಾಶ ನೀಡಬಾರದು ಎಂದು ವಿನಂತಿಸಿದ್ದೇವೆ.ಜಿ.ಪಂ, ತಾ.ಪಂ ಮೂಲಕ ಸಂಬಳ ಪಡೆಯುವ
ವರಿಗೆ ಸಮಸ್ಯೆ ಎದುರಾಗಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ. ಎಂ. ನಾರಾಯಣಸ್ವಾಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT