ADVERTISEMENT

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ: ಇಂದು ಸರ್ಕಾರಿ ಶಾಲೆ ಬಂದ್‌

​ಪ್ರಜಾವಾಣಿ ವಾರ್ತೆ
Published 8 ಜುಲೈ 2019, 19:42 IST
Last Updated 8 ಜುಲೈ 2019, 19:42 IST
   

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಂಗಳವಾರ (ಜುಲೈ 9) ಎಲ್ಲ ಸರ್ಕಾರಿ ಶಾಲೆಗಳ ಬಂದ್‌ಗೆ ಕರೆ ನೀಡಿದೆ. ಹೀಗಾಗಿ, ರಾಜ್ಯದಾದ್ಯಂತ ಶೈಕ್ಷಣಿಕ ಚಟುವಟಿಕೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

‘ಶಿಕ್ಷಕರು ರಾಜ್ಯದ ಎಲ್ಲ 46 ಸಾವಿರ ಸರ್ಕಾರಿ ಶಾಲೆಗಳನ್ನು ಬಂದ್‌ ಮಾಡಿ, ಬೃಹತ್‌ ರ‍್ಯಾಲಿಗಳ ಮೂಲಕ ಪ್ರತೀ ಜಿಲ್ಲೆಗಳ ಉಪ ನಿರ್ದೇಶಕರ ಕಚೇರಿಯಲ್ಲಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಜೊತೆಗೆ ಬೇಡಿಕೆಗಳ ಹಕ್ಕೊತ್ತಾಯ ಮಂಡಿಸಲಿದ್ದಾರೆ’ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.

ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು 1ರಿಂದ 5ನೇ ತರಗತಿಗಳಿಗೆ ಮಾತ್ರ ಬೋಧಿಸಬೇಕು ಎಂದು ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು. ಸರ್ಕಾರ ಹೊಸದಾಗಿ ಇಂಗ್ಲಿಷ್ ಮಾಧ್ಯಮ ಆರಂಭಿಸಿರುವುದರಿಂದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಿದೆ. ಆದ ಕಾರಣ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಮತ್ತಿತರ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಅವರು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.