ADVERTISEMENT

ಬೀದರ್: ನಾಡಗೀತೆ ಹಾಡುವಾಗ ಮೂತ್ರ ವಿಸರ್ಜನೆ, ಇಬ್ಬರು ಶಿಕ್ಷಕರ ಅಮಾನತು

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2020, 19:35 IST
Last Updated 15 ಫೆಬ್ರುವರಿ 2020, 19:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀದರ್: ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಈಚೆಗೆ ನಡೆದ 2019-20ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಾಡಗೀತೆ ಹಾಡುವಾಗ ಮೂತ್ರ ವಿಸರ್ಜನೆ ಮಾಡಿ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಔರಾದ್‌ ತಾಲ್ಲೂಕಿನ ಹಿಪ್ಪಳಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೀರೇಶ ಕಡಗಾಂವೆ ಹಾಗೂ ಗಂಗಾರಾಮ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಜಯಕುಮಾರ ರಾಠೋಡ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ ಎಚ್‌.ಸಿ. ಸೇವೆಯಿಂದ ಅಮಾನತು ಗೊಳಿಸಿದ್ದಾರೆ.

ಫೆಬ್ರುವರಿ 12 ರಂದು ಘಟನೆ ನಡೆದಿದ್ದು, ಜಿಲ್ಲಾಧಿಕಾರಿ ಎಚ್‌.ಆರ್‌.ಮಹಾದೇವ ತಕ್ಷಣವೇ ಶಿಕ್ಷಕರನ್ನು ಅಮಾನತುಗೊಳಿಸಲು ಸೂಚಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.