ADVERTISEMENT

ಶಿಕ್ಷಕರ ವರ್ಗಾವಣೆ ಮಸೂದೆಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 19:28 IST
Last Updated 16 ಮಾರ್ಚ್ 2020, 19:28 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಮಸೂದೆಗೆ ವಿಧಾನಸಭೆ ಸೋಮವಾರ ಒಪ್ಪಿಗೆ ನೀಡಿದೆ.

ಶಿಕ್ಷಕರ ಸ್ನೇಹಿ ವರ್ಗಾವಣೆ ಮಸೂದೆ ಇದಾಗಿದೆ. ಇದೇ ಮೇ ತಿಂಗಳೊಳಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ವರ್ಗಾವಣೆಯಲ್ಲಿ ಅಧಿಕಾರಿಗಳ ಹಸ್ತಕ್ಷೇಪ ತಡೆಯಲು ಹೊಸದಾಗಿ ಆ್ಯಪ್‌ ಅಭಿವೃದ್ಧಿ ಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್ ಸದನಕ್ಕೆ ತಿಳಿಸಿದರು.

‘ಹೊಸದಾಗಿ ನೇಮಕವಾಗುವ ಶಿಕ್ಷಕರು 10 ವರ್ಷ ಗ್ರಾಮೀಣ ಭಾಗದಲ್ಲಿಕಡ್ಡಾಯವಾಗಿ ಸೇವೆ ಸಲ್ಲಿಸಬೇಕು’ ಎಂದರು.

ADVERTISEMENT

ಕಾಂಗ್ರೆಸ್‌ನ ರಮೇಶ್‌ ಕುಮಾರ್‌, ಪ್ರಿಯಾಂಕ್‌ ಖರ್ಗೆ, ಪರಮೇಶ್ವರ ನಾಯ್ಕ, ಜೆಡಿಎಸ್‌ನ ಎ.ಟಿ.ರಾಮಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಬಿಜೆಪಿಯ ಆರಗ ಜ್ಞಾನೇಂದ್ರ ಮಸೂದೆ ಕುರಿತು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.