ADVERTISEMENT

ಶಿಕ್ಷಕರಿಗೆ ಮನೆಯಿಂದಲೇ ಕೆಲಸ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2020, 21:15 IST
Last Updated 22 ಮಾರ್ಚ್ 2020, 21:15 IST
ಸಚಿವ ಸುರೇಶ್ ಕುಾರ್
ಸಚಿವ ಸುರೇಶ್ ಕುಾರ್   

ಬೆಂಗಳೂರು: ಕೊರೊನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಎಲ್ಲ ಶಿಕ್ಷಕರು, ಬೋಧಕೇತರ ಸಿಬ್ಬಂದಿ, ಸಂಶೋಧಕರು ಮತ್ತು ಇತರೆ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಲು ಆದೇಶ ಹೊರಡಿಸಲಾಗಿದೆ.

ಮನೆಯಲ್ಲಿ ಆನ್‌ಲೈನ್‌ ಮೂಲಕ ಬೋಧನೆ, ಮೌಲ್ಯಮಾಪನ ಮಾಡಲು ಅಗತ್ಯವಿರುವ ಪಠ್ಯವಸ್ತು ಅಭಿವೃದ್ಧಿಪಡಿಸಬೇಕು. ಮುಂದಿನ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ಪಠ್ಯ ಯೋಜನೆ, ಟಿಪ್ಪಣಿ ಸಿದ್ಧಪಡಿಸುವುದು, ಬೋಧಿಸುವ ವಿಷಯದ ಪಠ್ಯವನ್ನು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ.

ಅಲ್ಲದೆ, ವಿದ್ಯಾರ್ಥಿಗಳಿಗಾಗಿ ಪ್ರಶ್ನೆಪತ್ರಿಕೆಗಳ ಕೋಶ ತಯಾರಿಸುವುದು, ಏಕ್‌ ಭಾರತ್‌ ಶ್ರೇಷ್ಠ ಭಾರತ್‌ ಕಾರ್ಯಕ್ರಮಕ್ಕೆ ವಿನೂತನ ಯೋಜನೆಯನ್ನೂ ಸಿದ್ಧಪಡಿಸಬೇಕು ಎಂದೂ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.