ADVERTISEMENT

ಟೆಕಿ ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2018, 7:09 IST
Last Updated 9 ಆಗಸ್ಟ್ 2018, 7:09 IST
   

ಬೆಂಗಳೂರು: ಟೆಕಿ ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಈ ಕುರಿತಂತೆ ಅಜಿತಾಬ್ ತಂದೆ ಅಶೋಕ್ ಕುಮಾರ್ ಸಿನ್ಹಾ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಮುಕ್ತಾಯಗೊಳಿಸಿತು.

ಪ್ರಕರಣವೇನು?
ಕುಮಾರ್ ಅಜಿತಾಬ್ 2017ರ ಡಿಸೆಂಬರ್ 18ರ‌ ಸಂಜೆ 6.30ಕ್ಕೆ ತಮ್ಮ ಮನೆಯಿಂದ ಹೊರ ಹೋದವರು ಈವರೆಗೂ ಪತ್ತೆಯಾಗಿಲ್ಲ.

ADVERTISEMENT

ಈ ಬಗ್ಗೆ ಅಜಿತಾಬ್ ತಂದೆ ವೈಟ್‌ಫೀಲ್ಡ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಪೊಲೀಸರು ಡಿಸೆಂಬರ್ 20 ಹಾಗೂ 29ರಂದು ಎರಡು ಎಫ್‌ಐಆರ್ ದಾಖಲಿಸಿದ್ದಾರೆ.

"ಅಜಿತಾಬ್ ಪತ್ತೆ ಮಾಡುವಲ್ಲಿ ಪೊಲೀಸರು ಯಾವುದೇ ಯಶಸ್ಸು ಸಾಧಿಸಿಲ್ಲ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು" ಎಂದು ಕೋರಿ ಅಶೋಕ್ ಕುಮಾರ್ ಸಿನ್ಹಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.