ನಮ್ಮ ಮೆಟ್ರೊ
ನವದೆಹಲಿ: ಬೆಂಗಳೂರು ನಮ್ಮ ಮೆಟ್ರೊ ದರಗಳು ದೇಶದಲ್ಲೇ ಅತ್ಯಧಿಕವಾಗಿದ್ದು, ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ದರ ನಿಗದಿ ಸಮಿತಿ ವರದಿ ಬಹಿರಂಗಗೊಳಿಸಿಲ್ಲ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದರು.
ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬುಧವಾರ ಮಾತನಾಡಿದ ಸೂರ್ಯ, ‘ಕಳೆದ ಕೆಲವು ತಿಂಗಳುಗಳಿಂದ ಹಲವಾರು ಸಲ ಮನವಿ ಮಾಡಲಾಗಿತ್ತು. ಆದರೂ, ನಿಗಮವು ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ದರ ಏರಿಕೆಯ ಕಾರಣವನ್ನು ತಿಳಿದುಕೊಳ್ಳಲು ಅರ್ಹರು’ ಎಂದರು.
‘ಬೆಂಗಳೂರು ಮೆಟ್ರೊದಲ್ಲಿ 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ₹90 ಪಾವತಿಸಬೇಕಿದೆ. ಸಾರ್ವಜನಿಕರ ಆಕ್ರೋಶದ ನಂತರ ಬಿಎಂಆರ್‌ಸಿಎಲ್ ದರವನ್ನು ಅಲ್ಪ ಕಡಿಮೆ ಮಾಡಿದೆ. ಆದರೂ, ಪ್ರಯಾಣಿಕರಿಗೆ ಹೊರೆಯಾಗಿದೆ’ ಎಂದರು.
ಮೆಟ್ರೊ ಕೆಂಪು ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.