ADVERTISEMENT

ಬಿಹಾರ ಬದಲಾವಣೆಗಾಗಿ ತೇಜಸ್ವಿ ಸಿಎಂ ಆಗಬೇಕು: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 16:23 IST
Last Updated 4 ನವೆಂಬರ್ 2025, 16:23 IST
<div class="paragraphs"><p>ಡಿಕೆಶಿ </p></div>

ಡಿಕೆಶಿ

   

ಬೆಂಗಳೂರು: ‘ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನ ಬೆಂಬಲಿಸಿ, ತೇಜಸ್ವಿ ಯಾದವ್ ಮುಖ್ಯಮಂತ್ರಿ ಆಗಬೇಕು ಎಂದು ಮತದಾರರಿಗೆ ಮನವಿ ಮಾಡಿದ್ದೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮೊದಲ ಹಕ್ಕು. ದೇಶದ ಜನ ಮತ ಚಲಾಯಿಸಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಎಲ್ಲಾ ಸಂಸ್ಥೆಗಳು ಬಿಹಾರದ ಮತದಾರರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಬಿಹಾರದ ಜನತೆ ಬದಲಾವಣೆ ಬಯಸಿದ್ದಾರೆ. ಹೀಗಾಗಿ ನಾವು ಆತ್ಮವಿಶ್ವಾಸದಲ್ಲಿದ್ದೇವೆ. ಇದೇ ದೇಶದ ಒತ್ತಾಸೆಯಾಗಿದೆ’ ಎಂದರು.

ADVERTISEMENT

ಬಿಹಾರ ಮತದಾರರಿಗಾಗಿ ವಿಶೇಷ ರೈಲು ವ್ಯವಸ್ಥೆಗೆ ಮನವಿ ಮಾಡುತ್ತೀರಾ ಎಂಬ ಪ್ರಶ್ನೆಗೆ, ‘ಈ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಇಲ್ಲಿನ ಬಿಹಾರ ರಾಜ್ಯದ ಕಾರ್ಮಿಕರಿಗೆ ವೇತನ ಸಹಿತ ರಜೆ ಸಿಕ್ಕರೆ ಸಾಕು. ಅವರು ಹೋಗಿ ಮತದಾನ ಮಾಡಿ ಬರುತ್ತಾರೆ. ಕೇಂದ್ರ ಸರ್ಕಾರದ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಎಲ್ಲರಿಗೂ ಸಹಾಯ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಬಿಹಾರದ ಜನ ಇಲ್ಲಿಗೆ ಬಂದು ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ತಮ್ಮದೇ ಸಂಘ ಸ್ಥಾಪಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.