ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಭಾಗವಹಿಸಿ, ಕೊಯಮತ್ತೂರಿನ ಈಶಾ ಯೋಗ ಕೇಂದ್ರ ಆಯೋಜಿಸಿದ್ದ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆ ವೇದಿಕೆ ಹಂಚಿಕೊಂಡ ನಂತರ ಕಾಂಗ್ರೆಸ್ ವಲಯದಲ್ಲೇ ಶಿವಕುಮಾರ್ ವಿರುದ್ಧ ಟೀಕೆಗಳು ಕೇಳಿ ಬಂದಿದ್ದವು.
ಈ ನಡುವೆಯೇ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರೂ ಆದ ತೇಜಸ್ವಿ ಸೂರ್ಯ ಭೇಟಿ ಮಾಡಿದರು. ‘ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಅವರು ಭೇಟಿ ನೀಡಿದ್ದರು. ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ’ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.