ADVERTISEMENT

ಟೆಲಿಫೋನ್‌ ಕದ್ದಾಲಿಕೆ ಆರೋಪ: ಸಿಎಟಿ ಆದೇಶ ತಡೆಗೆ ಹೈಕೋರ್ಟ್‌ ನಕಾರ 

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 19:30 IST
Last Updated 10 ನವೆಂಬರ್ 2025, 19:30 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಟೆಲಿಫೋನ್‌ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧದ ಇಲಾಖಾ ತನಿಖೆ ರದ್ದುಗೊಳಿಸಿರುವ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರತಿವಾದಿ ಅಲೋಕ್‌ ಕುಮಾರ್‌ಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ಅಂತಿಮ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿತು.

ಪ್ರಕರಣವೇನು?

ADVERTISEMENT

ಟೆಲಿಫೋನ್‌ ಕದ್ದಾಲಿಕೆ ಮಾಡಿದ್ದಾರೆಂಬ ಆರೋಪ 2019ರಲ್ಲಿ ಎದುರಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ಅಲೋಕ್‌ ಕುಮಾರ್‌ ವಿರುದ್ಧ ಬಿ ಅಂತಿಮ ವರದಿ ಸಲ್ಲಿಸಿತ್ತು. ಇದೇ ವೇಳೆ ರಾಜ್ಯ ಸರ್ಕಾರ, ಇಲಾಖಾ ತನಿಖೆಗೆ ಆದೇಶಿಸಿತ್ತು.ಅರ್ಜಿದಾರರಿಗೆ ಸಿಗಬೇಕಾದ ಬಡ್ತಿ ಸೇರಿದಂತೆ ಇತರೆ ಸೌಲಭ್ಯಗಳಿಗೆ ತಡೆ ನೀಡಿತ್ತು. 

ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಆಲೋಕ್‌ ಕುಮಾರ್‌ ಸಿಎಟಿ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸಿಎಟಿಯ ಮೂವರು ಸದಸ್ಯರ ಪೀಠವು ಅಲೋಕ್‌ ಕುಮಾರ್ ವಿರುದ್ಧದ ತನಿಖೆ ರದ್ದುಗೊಳಿಸಿ ಆದೇಶಿಸಿತ್ತು ಮತ್ತು ಅವರಿಗೆ ಸಲ್ಲಬೇಕಾದ ಎಲ್ಲ ರೀತಿಯ ಸವಲತ್ತುಗಳನ್ನು ನೀಡಬೇಕು’ ಎಂದು ಆದೇಶಿಸಿತ್ತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.