ADVERTISEMENT

ಭಾಷಾ ಕೇಂದ್ರಗಳ ವಿಲೀನಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 13:13 IST
Last Updated 7 ಏಪ್ರಿಲ್ 2021, 13:13 IST

ಬೆಂಗಳೂರು: ತೆಲುಗು ಹಾಗೂ ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರಗಳನ್ನು ಭಾಷಾ ವಿಶ್ವವಿದ್ಯಾಲಯದಲ್ಲಿ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಎ.ರಾಧಾಕೃಷ್ಣರಾಜು ವಿರೋಧಿಸಿದ್ದಾರೆ.

‘ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ಅನೇಕ ಸಂಶೋಧನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಶಾಸ್ತ್ರೀಯ ಭಾಷಾ ಗೌರವ ಪೀಠಗಳನ್ನು ಭಾಷಾ ವಿಶ್ವವಿದ್ಯಾಲಯದಲ್ಲಿ ವಿಲೀನಗೊಳಿಸುವುದು ಖಂಡನಾರ್ಹ. ತೆಲುಗು ಹಾಗೂ ಕನ್ನಡ ಸಾಹಿತ್ಯ ಲೋಕದ ಧುರೀಣರು, ಭಾಷಾಭಿಮಾನಿಗಳು ಹಾಗೂ ಕಲಾವಿದರು ಇದನ್ನು ವಿರೋಧಿಸಬೇಕು. ಈ ಸಂಬಂಧ ಸಹಿ ಸಂಗ್ರಹ ಚಳವಳಿ ಹಮ್ಮಿಕೊಂಡು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಬೇಕು’ ಎಂದು ಕರ್ನಾಟಕ ತೆಲುಗು ಅಕಾಡೆಮಿಯ ವ್ಯವಸ್ಥಾಪಕ ಅಧ್ಯಕ್ಷರೂ ಆಗಿರುವ ರಾಧಾಕೃಷ್ಣರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT