ADVERTISEMENT

ಜೂನ್ 8ರಿಂದ ದೇವಾಲಯಗಳಲ್ಲಿ ದರ್ಶನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 31 ಮೇ 2020, 19:48 IST
Last Updated 31 ಮೇ 2020, 19:48 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ    

ಉಡು‍‍ಪಿ: ಜೂನ್‌ 8ರಿಂದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ಹಾಗೂ ಇತರೆ ಎಲ್ಲಾ ದೇವಸ್ಥಾನಗಳನ್ನು ತೆರೆದು ಭಕ್ತರಿಗೆ ಪೂಜೆ ಪುನಸ್ಕಾರ ಮತ್ತು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಹಿಂದೆ ಜೂನ್ 1ಕ್ಕೆ ದೇವಸ್ಥಾನಗಳನ್ನು ತೆರೆಯಲು ನಿರ್ಧರಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರದ ನೂತನ ಮಾರ್ಗಸೂಚಿಯಂತೆ ಜೂನ್ 8ಕ್ಕೆ ಮುಂದೂಡಲಾಗಿದ್ದು, ಭಕ್ತರು ಸಹಕರಿಸಬೇಕು.ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಭಕ್ತರು ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆಯಬೇಕು ಎಂದು ಸಚಿವ ಕೋಟ ಮನವಿ ಮಾಡಿದರು.

ತೀರ್ಥ ಪ್ರಸಾದವಿಲ್ಲ: ಕುಂಕುಮ ಗಂಧ ಇದೆ: ಕೊರೊನಾ ಸೋಂಕು ತಡೆಯುವ ಸಲುವಾಗಿ ಸದ್ಯ ದೇವಸ್ಥಾನಗಳಲ್ಲಿ ತೀರ್ಥ ಪ್ರಸಾದ ವಿತರಣೆ ನಡೆಯುವುದಿಲ್ಲ. ಕುಂಕುಮ ಹಾಗೂ ಗಂಧವನ್ನು ಪಡೆಯಬಹುದು. ದೇವಸ್ಥಾನಗಳಲ್ಲಿ ಗಂಟೆ ಬಾರಿಸುವುದು ಸೇರಿದಂತೆ ಇತರೆ ಧಾರ್ಮಿಕ ವಿಷಯಗಳ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.